SSLC, PUCಗೆ 3 ಪಬ್ಲಿಕ್ ಪರೀಕ್ಷೆ – ಮಧು ಬಂಗಾರಪ್ಪ

ಬೆಂಗಳೂರು : ಎಸ್‌ ಎಸ್‌ ಎಲ್‌ ಸಿ, ಪಿಯುಸಿಗೆ ಇನ್ಮುಂದೆ 3 ಪಬ್ಲಿಕ್ ಪರೀಕ್ಷೆಗಳನ್ನು ಅನುಷ್ಠಾನ ಮಾಡಿದ್ದೇವೆ. ಇದರಿಂದ ಮಕ್ಕಳಿಗೆ ಹೆಚ್ಚಿನ ರೀತಿಯಲ್ಲಿ ಅನುಕೂಲವಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ನಾವು ಮಾತು ಕೊಟ್ಟಂತೆ ಎನ್‌ ಇಪಿ ರದ್ದು ಮಾಡಿದ್ದೇವೆ. ಹಿಂದಿನ ಪಠ್ಯಕ್ರಮ ಜಾರಿ ಮಾಡಿದ್ದೇವೆ ಬಿಜೆಪಿ ಸರ್ಕಾರ ಮಾಡಿದ ಲೋಪ ಸರಿ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಎಸ್‌ ಎಸ್‌ ಎಲ್‌ ಸಿ, ಪಿಯುಸಿಗೆ 3 ಪಬ್ಲಿಕ್ ಪರೀಕ್ಷೆಗಳನ್ನು ಅನುಷ್ಠಾನ ಮಾಡಿದ್ದೇವೆ. ಇದರಿಂದ ಮಕ್ಕಳಿಗೆ ಅನುಕೂಲ ಆಗುತ್ತದೆ. ಈ ವ್ಯವಸ್ಥೆ ಎನ್‌ ಇಪಿಯಲ್ಲಿ ಇಲ್ಲ. ಕೆಪಿಎಸ್ ಶಾಲೆಗಳಲ್ಲಿ ಎಲ್‌ ಕೆಜಿ, ಯುಕೆಜಿ ಪ್ರಾರಂಭ ಮಾಡುವ ವ್ಯವಸ್ಥೆ ಮಾಡ್ತಿದ್ದೇವೆ. ಎಸ್‌ ಇಪಿಯಲ್ಲಿ ಉತ್ತಮ ಶಿಕ್ಷಣ ಕೊಡ್ತೀವಿ. ಇದಕ್ಕಾಗಿ ಸಮಿತಿ ನೇಮಕ ಮಾಡಲಾಗಿದೆ. ಉತ್ತಮ ವ್ಯಕ್ತಿಗಳನ್ನ ಸೃಷ್ಟಿ ಮಾಡುವ ಪಾಲಿಸಿ ಎಸ್‌ ಇಪಿ ಜಾರಿ ಮಾಡ್ತೀವಿ. ಎನ್‌ಇಪಿ ರದ್ದು ನಿರ್ಧಾರ ವಾಪಸ್ ಇಲ್ಲವೇ ಇಲ್ಲ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

LEAVE A REPLY

Please enter your comment!
Please enter your name here