ರೈಲಿನಲ್ಲಿ ಮತ್ತೊಂದು ಬೆಂಕಿ ಅನಾಹುತ 

ತೆಲಂಗಾಣದ ಕಾಜಿಪೇಟೆ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ರೈಲಿನಲ್ಲಿ ಬೆಂಕಿ ಸಂಭವಿಸಿ ಹಲವು ಬೋಗಿಗಳು ಸುಟ್ಟು ಕರಕಲಾಗಿವೆ. ರೈಲಿನಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ. ಹೀಗಾಗಿ ಯಾವುದೇ ಸಾವು ನೋವು ಸಂಭವಿಸಿಲ್ಲ.

ವಿಷಯ ತಿಳಿಯುತ್ತಿದ್ದಂತೆಯೇ ಅಗ್ಮಿಶಾಮ ಸಿಬ್ಬಂದಿ ಅಲ್ಲಿಗೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ರೈಲಿನಲ್ಲಿ ಯಾವುದೇ ಪ್ರಯಾಣಿಕರು ಇಲ್ಲದಿದ್ದರೂ, ನಿಲ್ದಾಣದಲ್ಲಿ ನೂರಾರು ಪ್ರಯಾಣಿಕರಿದ್ದರು. ಹೀಗಾಗಿ ಕೆಲಕಾಲ ಗೊಂದಲದ ವಾತಾವಣರ ಉಂಟಾಗಿತ್ತು. ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ ಬಳಿಕ ವಾತಾವರಣ ತಿಳಿ ಆಯಿತು.

ಇನ್ನು ಬೆಂಕಿ ಅವಘಡಕ್ಕೆ ಯಾವುದೇ ಕಾರಣ ಗೊತ್ತಾಗಿಲ್ಲ. ಅಧಿಕಾರಿಗಳು ತನಿಖೆಯನ್ನು ಮುಂದುವರಿಸಿದ್ದಾರೆ.

LEAVE A REPLY

Please enter your comment!
Please enter your name here