30ರಂದು ಸಿಇಟಿ ಫಲಿತಾಂಶ

ಬೆಂಗಳೂರು : ಜೂನ್ ತಿಂಗಳಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶ ಇದೇ ತಿಂಗಳ 30ರಂದು ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.

ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆದುಕೊಳ್ಳಲು ಸಿಇಟಿ ಪರೀಕ್ಷೆಯನ್ನು ನಡೆಸಲಾಗುತ್ತದೆ. ಸಿಇಟಿ ಪರೀಕ್ಷಾ ಫಲಿತಾಂಶದ ಮೂಲಕ ವಿದ್ಯಾರ್ಥಿಗಳು ತಮ್ಮ ಮುಂದಿನ ವೃತ್ತಿಪರ ಕೋರ್ಸ್ ಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಈ ಹಿನ್ನೆಲೆ, ಈ ಬಾರಿಯ ಸಿಇಟಿ ಪರೀಕ್ಷೆಯನ್ನು ಬಿಗಿ ಭದ್ರತೆ ನಡುವೆ ಕಟ್ಟುನಿಟ್ಟಾಗಿ ನಡೆಸಲಾಗಿತ್ತು ಎಂದು ಡಾ. ಸಿ. ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಸಿಇಟಿ ಪರೀಕ್ಷೆ ನಡೆಸುವಾಗ ಸಿಬಿಎಸ್ ಸಿ ಮತ್ತು ಐಸಿಎಸ್ಇ ಪಠ್ಯಕ್ರಮದಲ್ಲಿ 12ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳಿಗೂ ಅವಕಾಶ ಕೊಡಲಾಗಿತ್ತು. ಈಗಾಗಲೇ ಅದರ ಫಲಿತಾಂಶ ಬಂದಿದ್ದು, ಸಿಇಟಿ ಬರೆದಿದ್ದ ವಿದ್ಯಾರ್ಥಿಗಳು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ತಮ್ಮ ಅಂಕಗಳನ್ನು ನಾಳೆ ಸಂಜೆಯೊಳಗೆ ಅಪ್ಲೋಡ್ ಮಾಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.

LEAVE A REPLY

Please enter your comment!
Please enter your name here