ಗಣತಿ ವಿಚಾರದಲ್ಲಿ ನನ್ನನ್ನಂತೂ ಯಾರೂ ಸಂದರ್ಶನ ಮಾಡಿಲ್ಲ – ಸಿದ್ದಗಂಗಾ ಶ್ರೀಗಳು

ತುಮಕೂರು: ಗಣತಿ ವಿಚಾರದಲ್ಲಿ ಎಲ್ಲರಿಗೂ ಸಂದರ್ಶನ ಆಗಿದೆಯೋ ಗೊತ್ತಿಲ್ಲ. ನನ್ನನ್ನಂತೂ ಯಾರೂ ಬಂದು ಸಂದರ್ಶನ ಮಾಡಿಲ್ಲ ಎಂದು ಸಿದ್ದಗಂಗಾ ಮಠ ಶ್ರೀ ಸಿದ್ದಲಿಂಗಸ್ವಾಮಿಜಿ ಹೇಳಿದ್ದಾರೆ.

ನಿನ್ನೆ ಜಾತಿ ಗಣತಿ ವರದಿ ಸರ್ಕಾರಕ್ಕೆ ಸಲ್ಲಿಕೆ ಆಗಿದೆ. ಈ ಜಾತಿ ಗಣತಿ ವೈಜ್ಞಾನಿಕವಾಗಿ ಆಗಿಲ್ಲ ಎಂದು ಅನೇಕರು ವಿರೋಧ ವ್ಯಕ್ತಪಡಿಸ್ತಿದ್ದಾರೆ. ಇದೇ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಸ್ವಾಮೀಜಿಗಳು.. ಜಾತಿ ಗಣತಿ ವಿಚಾರದಲ್ಲಿ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತೋ ಗೊತ್ತಿಲ್ಲ. ಇದಕ್ಕೆ ಯಾರೂ ವಿರೋಧ ಮಾಡಲು ಸಾಧ್ಯವಿಲ್ಲ. ಯಾಕೆಂದರೆ ಜಾತಿ ಆಧಾರದ ಮೇಲೆ ಸವಲತ್ತುಗಳನ್ನ ಕೊಡಬೇಕಾಗುತ್ತದೆ. ವೈಜ್ಞಾನಿಕವಾಗಿ ಆಗಿಲ್ಲ, ವ್ಯಾಪಕವಾಗಿ ಎಲ್ಲರನ್ನೂ ಸಂದರ್ಶನ ಮಾಡಿಲ್ಲ ಎಂಬ ಕೂಗು ಕೇಳಿಬರುತ್ತಿದೆ ಎಂದರು.

ಗಣತಿ ವಿಚಾರದಲ್ಲಿ ಎಲ್ಲರಿಗೂ ಸಂದರ್ಶನ ಆಗಿದೆಯೋ ಗೊತ್ತಿಲ್ಲ. ನನ್ನನ್ನಂತೂ ಯಾರೂ ಬಂದು ಸಂದರ್ಶನ ಮಾಡಿಲ್ಲ. ಎಲ್ಲರನ್ನೂ ಕೇಳಿ, ಪ್ರತಿಯೊಬ್ಬರನ್ನು ವಿಚಾರಿಸಿ ವರದಿ ಮಾಡಿದರೆ ಸೂಕ್ತ. ಎಲ್ಲರಿಗೂ ಸೌಲಭ್ಯ ಲಭ್ಯವಾಗುವ ರೀತಿಯಲ್ಲಿ ಮಾಡಿದರೆ ಉಪಕಾರವಾಗುತ್ತದೆ. ನಾನ್ಯಾವ ಜಾತಿ, ಏನು ಅಂತಾ ಯಾರೂ, ಯಾವ ಮಾಹಿತಿಯನ್ನೂ ಕೇಳಿಲ್ಲ. ಎಲ್ಲರ ಬಳಿಯೂ ಹೋಗಿದ್ವಿ ಅಂತಾ ಹೇಳ್ತಾರಲ್ವಾ? ನನ್ನ ಬಳಿಯೇ ಬಂದಿಲ್ಲ. ಪರೋಕ್ಷವಾಗಿ ವರದಿ ವೈಜ್ಞಾನಿಕವಾಗಿ ಆಗಿಲ್ಲ ಎಂದು ಹೇಳಿದ್ದಾರೆ.

ಪ್ರತಿಯೊಬ್ಬರನ್ನು ಕೇಳ್ತಾರಾ? ಅಥವಾ ಸಮಾಜದ ಮುಖಂಡರನ್ನ ಮಾತ್ರ ಕೇಳ್ತಾರಾ? ಏನು ಅಂತಾ ಗೊತ್ತಿಲ್ಲ. ಹಾಗಾಗಿ ನಾನು ಅದರ ಬಗ್ಗೆ ಮಾತನಾಡೋಕೆ ಹೋಗಲ್ಲ. ಎಲ್ಲರನ್ನೂ ಒಳಗೊಂಡಂತಹ ವರದಿ ಸ್ವೀಕಾರ ಆಗಲಿ. ಮತ್ತು ಆಯಾ ಜಾತಿಯ ಜನಸಂಖ್ಯೆ ಆಧಾರದ ಮೇಲೆ ಸೌಲಭ್ಯಗಳು ವಿತರಣೆ ಆಗಲಿ ಎಂದು ಸಿದ್ದಗಂಗಾ ಶ್ರೀಗಳು ಹೇಳಿದ್ದಾರೆ.

LEAVE A REPLY

Please enter your comment!
Please enter your name here