ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಇಲ್ಲ – ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಿವಾದಿತ ಪಠ್ಯಗಳ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸಂಪೂರ್ಣ ಪಠ್ಯ ಪರಿಷ್ಕರಣೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಶೈಕ್ಷಣಿಕ ವರ್ಷದಲ್ಲಿ ಕೆಲ ವಿವಾದಿತ ಪಠ್ಯಗಳನ್ನು ಪಟ್ಟಿ ಮಾಡಿ ಸಲ್ಲಿಸಿ. ಸಾಹಿತ್ಯ ಮತ್ತು ಸಾಂಸ್ಕೃತಿಕ ವಲಯ ಆಕ್ಷೇಪಿಸಿರುವ ಕೆಲ ಪಠ್ಯಗಳ ಪಟ್ಟಿ ಮಾಡುವಂತೆ ಸಿಎಂ ಸೂಚನೆ ನೀಡಿದ್ದಾರೆ.

ಒಟ್ಟಿನಲ್ಲಿ ಶಿಕ್ಷಣ ಇಲಾಖೆಯಿಂದ ವಿವಾದಿತ ಪಠ್ಯಗಳ ಪಟ್ಟಿ ಬಂದ ಬಳಿಕ ಸರ್ಕಾರ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ. ಸರ್ಕಾರದ ತೀರ್ಮಾನದ ಬಳಿಕ ವಿವಾದಿತ ಪಠ್ಯಗಳನ್ನು ಬೋಧಿಸದಂತೆ ಶಿಕ್ಷಣ ಇಲಾಖೆಯು ಶಾಲೆಗಳಿಗೆ ಸುತ್ತೋಲೆ ಹೊರಡಿಸಲಿದೆ. 

LEAVE A REPLY

Please enter your comment!
Please enter your name here