ಪಿತ್ರೋಡಾ ಹೇಳಿಕೆ ಪಕ್ಷದ ಹೇಳಿಕೆಯಲ್ಲ- ಕಾಂಗ್ರೆಸ್ ಅಂತರ ಕಾಯ್ದುಕೊಂಡಿತ್ತು

ನವದೆಹಲಿ: ಭಾರತೀಯ ಸಾಗರೋತ್ತರ ಕಾಂಗ್ರೆಸ್  ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ  ಹೇಳಿಕೆಯಿಂದ ಕಾಂಗ್ರೆಸ್‌  ಅಂತರವನ್ನು ಕಾಯ್ದುಕೊಂಡಿದೆ. ಅವರ ವೈಯಕ್ತಿ ಅಭಿಪ್ರಾಯವೇ ಹೊರತು ಕಾಂಗ್ರೆಸ್‌ ಅಭಿಪ್ರಾಯವಲ್ಲ ಎಂದು ವಕ್ತಾರ ಜೈರಾಂ ರಮೇಶ್‌ ಸ್ಪಷ್ಟಪಡಿಸಿದ್ದಾರೆ

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಅವರು ಪಿತ್ರೋಡಾ ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಾರೆ. ಪ್ರಜಾಪ್ರಭುತ್ವದಲ್ಲಿ ಒಬ್ಬ ವ್ಯಕ್ತಿಗೆ ತನ್ನ ವೈಯಕ್ತಿಕ ಅಭಿಪ್ರಾಯಗಳನ್ನು ಚರ್ಚಿಸಲು, ವ್ಯಕ್ತಪಡಿಸಲು ಮತ್ತು ಚರ್ಚಿಸಲು ಸ್ವಾತಂತ್ರ್ಯವಿದೆ. ಆದರೆ ಅದರ ಅರ್ಥ ಅವರ ಅಭಿಪ್ರಾಯಗಳು ಯಾವಾಗಲೂ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಹೇಳಿಕೆಯನ್ನು ಪ್ರತಿಬಿಂಬಿಸುತ್ತದೆ ಎಂದರ್ಥವಲ್ಲ ಎಂದು ಬರೆದುಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ದುರುದ್ದೇಶಪೂರಿತ ಮತ್ತು ಕಿಡಿಗೇಡಿತನದ ಚುನಾವಣಾ ಪ್ರಚಾರವನ್ನು ತಿರುಗಿಸಲು ಪಿತ್ರೋಡಾ ಅವರ ಹೇಳಿಕೆಯನ್ನು ತಿರುಚಲಾಗುತ್ತಿದೆ ಎಂದು ಹೇಳಿದ್ದಾರೆ.

ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು?
ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ ಅವರು ಅವರು ಅಮೆರಿಕದ ಉತ್ತರಾಧಿಕಾರ ತೆರಿಗೆ  ಬಗ್ಗೆ ಪ್ರಸ್ತಾಪಿಸಿ ಸಂಪತ್ತಿನ ಮರು ಹಂಚಿಕೆಯನ್ನು ಸಮರ್ಥಿಸಿಕೊಂಡಿದ್ದರು. ಅಮೇರಿಕಾದ ಸಂಯುಕ್ತ ಸಂಸ್ಥಾನದಲ್ಲಿ ಪಿತ್ರಾರ್ಜಿತ ತೆರಿಗೆ ಇದೆ. ವ್ಯಕ್ತಿಯ ಸಂಪತ್ತಿನ ಮೇಲೆ 55% ತೆರಿಗೆ ಹಾಕಲಾಗುತ್ತದೆ. ವ್ಯಕ್ತಿಯ ಮಕ್ಕಳು, ಕುಟುಂಬಕ್ಕೆ ಕೇವಲ 45 ಪ್ರತಿಶತ ಪಾಲನ್ನು ವರ್ಗಾಯಿಸಬಹುದು.

LEAVE A REPLY

Please enter your comment!
Please enter your name here